ಬ್ರೇಕಿಂಗ್ ನ್ಯೂಸ್: ಬಲೂಚಿಸ್ತಾನದಲ್ಲಿ ‘ಆಪರೇಷನ್ ಹೆರೋಫ್’ – BLA ಭಾರೀ ದಾಳಿ!

ಕ್ವೆಟ್ಟಾ | ಜನವರಿ 31, 2026
ಪಾಕಿಸ್ತಾನದ ಬಲೂಚಿಸ್ತಾನ್ ಪ್ರಾಂತ್ಯದಲ್ಲಿ ಪ್ರತ್ಯೇಕತಾವಾದಿ ಸಂಘಟನೆಯಾದ ಬಲೂಚ್ ಲಿಬರೇಶನ್ ಆರ್ಮಿ (BLA)  ‘ಆಪರೇಷನ್ ಹೆರೋಫ್’ ಅಡಿಯಲ್ಲಿ ಭಾರೀ ಹಾಗೂ ಸಂಯೋಜಿತ ದಾಳಿಗಳನ್ನು ನಡೆಸಿರುವುದಾಗಿ ಘೋಷಿಸಿದೆ.

 ಪ್ರಾಂತ್ಯದ ಕ್ವೆಟ್ಟಾ, ಗ್ವಾದರ್, ಮಸ್ತುಂಗ್, ನುಶ್ಕಿ, ಕಲಾತ್, ದಲ್ಬಂದಿನ್ ಸೇರಿದಂತೆ 12ಕ್ಕೂ ಹೆಚ್ಚು ಪ್ರದೇಶಗಳಲ್ಲಿ ಪಾಕಿಸ್ತಾನಿ ಸೇನೆ ಮತ್ತು ಭದ್ರತಾ ಪಡೆಗಳ ಗುರಿಯಾಗಿಸಿ ದಾಳಿ ನಡೆಸಿದೆ.

BLA ಬಿಡುಗಡೆ ಮಾಡಿದ ಹೇಳಿಕೆಯ ಪ್ರಕಾರ, ಈ ದಾಳಿಗಳಲ್ಲಿ ಪಾಕಿಸ್ತಾನದ 100ಕ್ಕೂ ಹೆಚ್ಚು ಸೈನಿಕರು ಸಾವನ್ನಪ್ಪಿದ್ದಾರೆ ಎನ್ನಲಾಗಿದೆ. ಕೆಲವು ಭದ್ರತಾ ತಾಣಗಳು, ಪೊಲೀಸ್ ಠಾಣೆಗಳು ಹಾಗೂ ಸರ್ಕಾರಿ ಕಟ್ಟಡಗಳ ಮೇಲೆ ದಾಳಿ ನಡೆಸಲಾಗಿದೆ ಎಂದು ವರದಿಯಾಗಿದೆ.

ಸ್ಥಳೀಯ ಮೂಲಗಳ ಪ್ರಕಾರ, ಹಲವು ಪ್ರದೇಶಗಳಲ್ಲಿ ಗುಂಡಿನ ಚಕಮಕಿ, ಸ್ಫೋಟಗಳ ಶಬ್ದಗಳು ಕೇಳಿಬಂದಿದ್ದು, ಸಾರ್ವಜನಿಕ ಸಂಚಾರ ಅಸ್ತವ್ಯಸ್ತವಾಗಿದೆ. ಮುನ್ನೆಚ್ಚರಿಕೆ ಕ್ರಮವಾಗಿ ಕೆಲವು ಜಿಲ್ಲೆಗಳಲ್ಲಿ ಭದ್ರತೆ ಹೆಚ್ಚಿಸಲಾಗಿದ್ದು, ಹೆಚ್ಚುವರಿ ಸೇನಾ ಪಡೆಗಳನ್ನು ನಿಯೋಜಿಸಲಾಗಿದೆ ಎಂದು ಸರಕಾರಿ ಮೂಲಗಳು ತಿಳಿಸಿವೆ.

ಈ ನಡುವೆ ಪಾಕಿಸ್ತಾನ ಸರ್ಕಾರ ಹಾಗೂ ಸೇನೆಯ ಅಧಿಕೃತ ಪ್ರತಿಕ್ರಿಯೆ ಇನ್ನೂ ಬಂದಿಲ್ಲ. ಆದರೆ, ಭದ್ರತಾ ಪಡೆಗಳು ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತರಲು ಪ್ರತಿದಾಳಿ ನಡೆಸುತ್ತಿವೆ ಎಂದು ಮೂಲಗಳು ತಿಳಿಸಿವೆ. ಸಾವುನೋವುಗಳ ನಿಖರ ಸಂಖ್ಯೆ ಕುರಿತು ಚರ್ಚಾಸ್ಪದ ಸಂಖ್ಯೆಗಳು ದೊರೆತಿದ್ದು ಲಭ್ಯವಿದ್ದು, ದೃಢೀಕರಣ ಇನ್ನೂ ಸಾಧ್ಯವಾಗಿಲ್ಲ.


ಬಲೂಚಿಸ್ತಾನದಲ್ಲಿ ವರ್ಷಗಳಿಂದ ನಡೆಯುತ್ತಿರುವ ಪ್ರತ್ಯೇಕತಾವಾದಿ ಹೋರಾಟದ ಭಾಗವಾಗಿ, BLA ಪಾಕಿಸ್ತಾನ ಸರ್ಕಾರದ ವಿರುದ್ಧ ಸಶಸ್ತ್ರ ಹೋರಾಟ ನಡೆಸುತ್ತಿದ್ದು, ಇತ್ತೀಚಿನ ‘ಆಪರೇಷನ್ ಹೆರೋಫ್’ ದಾಳಿಗಳು ಪ್ರಾಂತ್ಯದ ಭದ್ರತಾ ಪರಿಸ್ಥಿತಿಯನ್ನು ಮತ್ತಷ್ಟು ಗಂಭೀರಗೊಳಿಸಿವೆ.


Post a Comment

0 Comments