ಉಮರ್ ಖಾಲಿದ್ ಗೆ ಜಾಮೀನು ನೀಡಲು ಸುಪ್ರೀಂ ಕೋರ್ಟ್ ನಿರಾಕರಣೆ!

ದೆಹಲಿ : 2020ರಲ್ಲಿ ದೆಹಲಿಯಲ್ಲಿ ನಡೆದ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ  ಆರೋಪಿಗಳಾದ ಉಮರ್ ಖಾಲಿದ್ ಮತ್ತು ಶರ್ಜೀಲ್ ಇಮಾಮ್ ಅವರಿಗೆ ಜಾಮೀನು ನೀಡಲು ಸುಪ್ರೀಂ ಕೋರ್ಟ್ ಸ್ಪಷ್ಟವಾಗಿ ನಿರಾಕರಿಸಿದೆ.


ಈ ಕುರಿತಂತೆ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್, 'ಈ ಇಬ್ಬರು ಆರೋಪಿಗಳ ಮೇಲೆ ಗಂಭೀರ ಸ್ವರೂಪದ ಆರೋಪಗಳಿವೆ.  ಕೇವಲ ವಿಚಾರಣೆಯಲ್ಲಿ ವಿಳಂಬವಾಗಿದೆ ಎನ್ನುವ ಒಂದೇ ಕಾರಣಕ್ಕೆ UAPA (ಕಾನೂನುಬಾಹಿರ ಚಟುವಟಿಕೆಗಳ ತಡೆ ಕಾಯ್ದೆ) ಅಡಿಯಲ್ಲಿ ಜಾಮೀನು ನೀಡಲು ಸಾಧ್ಯವಿಲ್ಲ' ಎಂದು ನ್ಯಾಯಾಲಯ ಸ್ಪಷ್ಟಪಡಿಸಿದೆ.


ಅದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಉಳಿದ ಆರೋಪಿಗಳಾಗಿದ್ದ ಗಲ್ಫಿಶಾ ಫಾತಿಮಾ, ಮೀರಾನ್ ಹೈದರ್, ಶಿಫಾ ಉರ್ ರಹ್ಮಾನ್, ಶದಾಬ್ ಅಹ್ಮದ್ ಮತ್ತು ಮೊಹಮ್ಮದ್ ಸಲೀಂ ಖಾನ್ ಅವರಿಗೆ ಮಾತ್ರ ಸುಪ್ರೀಂ ಕೋರ್ಟ್ ಜಾಮೀನು ಮಂಜೂರು ಮಾಡಿದೆ.

 2020ರಲ್ಲಿ ದೆಹಲಿಯ ಉತ್ತರ-ಪೂರ್ವ ಭಾಗದಲ್ಲಿ ನಡೆದ ಗಲಭೆಗಳ ಪ್ರಕರಣವಾಗಿದ್ದು, ಆ ಹಿಂಸಾಚಾರದಲ್ಲಿ ಅನೇಕ ಮಂದಿ ಸಾ*ವನ್ನಪ್ಪಿದ್ದರು ಮತ್ತು ಹಲವರು ಗಂಭೀರವಾಗಿ ಗಾಯಗೊಂಡಿದ್ದರು. 

Post a Comment

0 Comments