ಬಾಂಗ್ಲಾದೇಶದಲ್ಲಿ ಮತ್ತೊಬ್ಬ ಹಿಂದೂ ಯುವಕನನ್ನು ಕೂಡಿ ಹಾಕಿ ಬೆಂಕಿ ಹಚ್ಚಿ ಹ*ತ್ಯೆ- ಜಗತ್ತಿನೆಲ್ಲೆಡೆ ಆಕ್ರೋಶ!


ನರ್ಸಿಂಗ್‌ಡಿ (ಬಾಂಗ್ಲಾದೇಶ):
ಬಾಂಗ್ಲಾದೇಶದಲ್ಲಿ ಹಿಂದೂ ಅಲ್ಪಸಂಖ್ಯಾತ ಸಮುದಾಯದ ವಿರುದ್ಧ ನಡೆಯುತ್ತಿರುವ ಹಿಂಸಾಚಾರ ಮತ್ತೊಮ್ಮೆ ತಲೆದೋರಿದ್ದು, ನರ್ಸಿಂಗ್‌ಡಿ ಜಿಲ್ಲೆಯಲ್ಲಿ ಮತ್ತೊಬ್ಬ ಹಿಂದೂ ಯುವಕನನ್ನು ಜೀವಂತವಾಗಿ ಬೆಂಕಿ ಇಟ್ಟು, ಸುಟ್ಟು ಹತ್ಯೆ ಮಾಡಲಾಗಿದೆ. ಈ ಭೀಕರ ಘಟನೆ ವಿಶ್ವಾದ್ಯಂತ ಆಕ್ರೋಶಕ್ಕೆ ಕಾರಣವಾಗಿದೆ.


ಮೃತನನ್ನು ಚಂಚಲ್ ಚಂದ್ರ ಭೌಮಿಕ್ (ಸುಮಾರು 23–25 ವರ್ಷ) ಎಂದು ಗುರುತಿಸಲಾಗಿದೆ. ವರದಿಗಳ ಪ್ರಕಾರ, ಯುವಕನು ಕೆಲಸ ಮಾಡುವ ಗ್ಯಾರೇಜ್‌ನಲ್ಲೇ ರಾತ್ರಿ ನಿದ್ರಿಸುತ್ತಿದ್ದ ವೇಳೆ ಮತಾಂಧರು ಶಟರ್ ಮುಚ್ಚಿ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದಾರೆ. ಕೆಲವೇ ನಿಮಿಷಗಳಲ್ಲಿ ಬೆಂಕಿ ವ್ಯಾಪಕವಾಗಿ ಹರಡಿದ್ದು, ಯುವಕನು ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ.


ಸ್ಥಳೀಯ ಪೊಲೀಸರು ಮತ್ತು ಅಗ್ನಿಶಾಮಕ ದಳಗಳು ಸ್ಥಳಕ್ಕೆ ಧಾವಿಸಿ ಬೆಂಕಿಯನ್ನು ನಂದಿಸಿದರೂ, ಯುವಕನ ಪ್ರಾಣ ಉಳಿಸಲು ಸಾಧ್ಯವಾಗಲಿಲ್ಲ. ಪ್ರಕರಣ ದಾಖಲಿಸಿಕೊಂಡಿರುವ ಸ್ಥಳೀಯ ಪೊಲೀಸರು ಸಿಸಿಟಿವಿ ದೃಶ್ಯಗಳನ್ನು ಪರಿಶೀಲಿಸುತ್ತಿದ್ದು, ಆರೋಪಿಗಳನ್ನು ಗುರುತಿಸಿ ಬಂಧಿಸುವ ಭರವಸೆ ನೀಡಿದ್ದಾರೆ.

ಮೃತನ ಕುಟುಂಬದವರು ಇದನ್ನು ಪೂರ್ವನಿಯೋಜಿತ ಹ*ತ್ಯೆ ಎಂದು ಆರೋಪಿಸಿದ್ದು, ನ್ಯಾಯ ಒದಗಿಸುವಂತೆ ಸರ್ಕಾರವನ್ನು ಆಗ್ರಹಿಸಿದ್ದಾರೆ. ಸ್ಥಳೀಯ ಹಿಂದೂ ಸಮುದಾಯದ ನಾಯಕರು ಈ ಘಟನೆಯನ್ನು ತೀವ್ರವಾಗಿ ಖಂಡಿಸಿ, ಅಲ್ಪಸಂಖ್ಯಾತರ ರಕ್ಷಣೆಗೆ ತಕ್ಷಣ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ.


ಇತ್ತೀಚಿನ ದಿನಗಳಲ್ಲಿ ಬಾಂಗ್ಲಾದೇಶದಲ್ಲಿ ಹಿಂದೂ ಸಮುದಾಯದ ಮೇಲೆ ನಡೆಯುತ್ತಿರುವ ದಾಳಿಗಳ ಸಂಖ್ಯೆ ಹೆಚ್ಚುತ್ತಿರುವ ಬಗ್ಗೆ ಆತಂಕ ವ್ಯಕ್ತವಾಗಿದ್ದು, ಈ ಹೊಸ ಘಟನೆ ಅಲ್ಪಸಂಖ್ಯಾತರ ಸುರಕ್ಷತೆ ಕುರಿತು ಗಂಭೀರ ಪ್ರಶ್ನೆಗಳನ್ನು ಎಬ್ಬಿಸಿದೆ.

Post a Comment

0 Comments