ಮುಂಬೈ: ಮುಂಬೈ ವಿಮಾನ ನಿಲ್ದಾಣದಲ್ಲಿ ಪ್ರಯಾಣಿಕರನ್ನು ಹೊತ್ತಿದ್ದ ಎರಡು ವಿಮಾನಗಳು ರನ್ ವೇ ಯಲ್ಲಿ ಡಿಕ್ಕಿ ಯಾಗಿದೆ. ಈ ಘಟನೆಯಿಂದ ಸಂಭವಿಸಬಹುದಾಗಿದ್ದ ಭಾರಿ ಅನಾಹುತ ಕೂದಲೆಳೆಯ ಅಂತರದಲ್ಲಿ ತಪ್ಪಿ ಹೋಗಿದೆ.
ಏರ್ ಇಂಡಿಯಾ ಸಂಸ್ಥೆಯ ಏಐ 2732 (ಮುಂಬೈ–ಕೊಯಂಬತ್ತೂರು) ವಿಮಾನವು ರನ್‌ವೇ ಮೇಲೆ ಸ್ಥಿರವಾಗಿದ್ದಾಗ, ಹೈದರಾಬಾದ್‌ನಿಂದ ಮುಂಬೈಗೆ ಬಂದ ಇಂಡಿಗೋ ಸಂಸ್ಥೆಯ 6ಇ 791 ವಿಮಾನವು ಲ್ಯಾಂಡಿಂಗ್ ನಂತರ ಟ್ಯಾಕ್ಸಿಂಗ್ ಮಾಡುತ್ತಿದ್ದ ವೇಳೆ ಎರಡೂ ವಿಮಾನಗಳ ರೆಕ್ಕೆಗಳು ಪರಸ್ಪರ ತಾಕಿಕೊಂಡಿವೆ.
ಘಟನೆಯ ಸಂದರ್ಭದಲ್ಲಿ ಎರಡು ವಿಮಾನಗಳಲ್ಲಿ ಪ್ರಯಾಣಿಕರಿದ್ದರು ಎನ್ನಲಾಗಿದ್ದು ಎಲ್ಲ ಪ್ರಯಾಣಿಕರು ಸುರಕ್ಷಿತವಾಗಿದ್ದಾರೆ ಎಂದು ವರದಿಯಾಗಿದೆ.
ತಕ್ಷಣ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳಲಾಗಿದ್ದು ಯಾವುದೇ ರೀತಿಯ ಪ್ರಾಣ ಹಾನಿ ಸಂಭವಿಸಿಲ್ಲ. ಘಟನೆಯ ಸಂದರ್ಭದಲ್ಲಿ ತಕ್ಷಣಕ್ಕೆ ಆತಂಕಗೊಂಡಿದ್ದ ವಿಮಾನದ ಒಳಗಿದ್ದ ಪ್ರಯಾಣಿಕರು ಬಳಿಕ ನೆಮ್ಮದಿಯ ನಿಟ್ಟುಸಿರು ಬಿಡುವಂತಾಗಿದೆ.
ಈ ಕುರಿತಂತೆ ತನಿಖೆಗೆ ಆದೇಶಿಸಲಾಗಿದೆ.
0 Comments