ಅಯೋಧ್ಯಾ ರಾಮ ಮಂದಿರ ದಾಳಿ ಸಂಚಿನ ಆರೋಪಿ ಫರೀದಾಬಾದ್ ಜೈಲಿನಲ್ಲಿ ಹತ್ಯೆ!

ಅಯೋಧ್ಯೆಯ ರಾಮ ಮಂದಿರದ ಮೇಲೆ ದಾಳಿ ನಡೆಸುವ ಸಂಚು ರೂಪಿಸಿದ್ದ ಆರೋಪದ ಮೇಲೆ ಬಂಧನಕ್ಕೊಳಗಾಗಿದ್ದ 20 ವರ್ಷದ ಉಗ್ರ ಆರೋಪಿಯಾದ ಅಬ್ದುಲ್ ರಹ್ಮಾನ್, ಅಯೋಧ್ಯಾ ಜಿಲ್ಲೆಯ ಜೈಲಿನಲ್ಲಿ ಭಾನುವಾರ ರಾತ್ರಿ ಮೃತಪಟ್ಟಿದ್ದಾನೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.


ಜೈಲು ಅಧಿಕಾರಿಗಳ ಪ್ರಕಾರ, ಭಾನುವಾರ ರಾತ್ರಿ ಸುಮಾರು 8 ಗಂಟೆ ಸುಮಾರಿಗೆ ಜೈಲಿನೊಳಗೆ ಮತ್ತೊಬ್ಬ ಕೈದಿಯಿಂದ ತೀಕ್ಷ್ಣ ಆಯುಧದಿಂದ ಹಲ್ಲೆಗೆ ಒಳಗಾಗಿದ್ದಾನೆ.

ಗಂಭೀರವಾಗಿ ಗಾಯಗೊಂಡ ರಹ್ಮಾನ್ ಅವರನ್ನು ತಕ್ಷಣವೇ ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದ್ದು, ವೈದ್ಯರು ಅವರನ್ನು ಮೃತರೆಂದು ಘೋಷಿಸಿದ್ದಾರೆ.


ಭದ್ರತಾ ಸಂಸ್ಥೆಗಳ ತನಿಖೆಯ ಬಳಿಕ ಅಬ್ದುಲ್ ರಹ್ಮಾನ್ ಅವರನ್ನು ಅಯೋಧ್ಯೆಯ ರಾಮ ಮಂದಿರದ ಮೇಲೆ ಉಗ್ರ ದಾಳಿ ನಡೆಸುವ ಸಂಚಿನಲ್ಲಿ ಭಾಗಿಯಾಗಿದ್ದ ಆರೋಪದ ಮೇಲೆ ಬಂಧಿಸಿ, ನೀಮ್ಕಾ ಜಿಲ್ಲಾ ಜೈಲಿನಲ್ಲಿ ಇರಿಸಲಾಗಿತ್ತು.

ಪ್ರಾಥಮಿಕ ತನಿಖೆಯಲ್ಲಿ, ಮತ್ತೊಬ್ಬ ಕೈದಿ ಜೈಲಿನೊಳಗೆ ಹಲ್ಲೆ ನಡೆಸಿರುವುದು ಬೆಳಕಿಗೆ ಬಂದಿದ್ದು, ಹಲ್ಲೆಯ ಹಿಂದಿನ ಉದ್ದೇಶ ಇನ್ನೂ ಸ್ಪಷ್ಟವಾಗಿಲ್ಲ.


ಘಟನೆಯ ಬಳಿಕ ಹಿರಿಯ ಪೊಲೀಸ್ ಅಧಿಕಾರಿಗಳು ಜೈಲಿಗೆ ಭೇಟಿ ನೀಡಿದ್ದು, ಜೈಲೊಳಗಿನ ಭದ್ರತೆಯಲ್ಲಿ ಲೋಪವಿತ್ತೇ ಎಂಬುದರ ಕುರಿತು ಉನ್ನತ ಮಟ್ಟದ ತನಿಖೆಗೆ ಆದೇಶ ನೀಡಲಾಗಿದೆ.

ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದ್ದು, ಪ್ರಕರಣದ ಕುರಿತು ಮುಂದಿನ ತನಿಖೆ ಮುಂದುವರಿದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.



Post a Comment

0 Comments