ದುಬೈ | ಫೆಬ್ರವರಿ 28
ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ ಹೆಚ್ಚುತ್ತಿರುವ ಹಿನ್ನೆಲೆ, ಇರಾನ್ ನಡೆಸಿದ ಕ್ಷಿಪಣಿ ದಾಳಿಗಳ ನಂತರ ಸುರಕ್ಷತಾ ಕ್ರಮವಾಗಿ ಬುರ್ಜ್ ಖಲಿಫಾ ಕಟ್ಟಡವನ್ನು ತಾತ್ಕಾಲಿಕವಾಗಿ ಖಾಲಿ ಮಾಡಿಸಲಾಗಿದೆ.
ದುಬೈನಲ್ಲಿ ಸ್ಫೋಟ ಶಬ್ದಗಳು ಕೇಳಿಬಂದ ಹಿನ್ನೆಲೆಯಲ್ಲಿ ಅಧಿಕಾರಿಗಳು ತಕ್ಷಣ ಎಚ್ಚರಿಕೆ ನೀಡಿದ್ದು, ಕಟ್ಟಡದಲ್ಲಿದ್ದ ಜನರನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಲಾಯಿತು. ಕಟ್ಟಡಕ್ಕೆ ಇಲ್ಲಿಯತನಕ ಯಾವುದೇ ಹಾನಿ ಸಂಭವಿಸಿಲ್ಲ ಎಂದು ಪ್ರಾಥಮಿಕ ಮಾಹಿತಿ ಬಂದಿದೆ.
Dubai ಸೇರಿದಂತೆ ಯುಎಇಯ ಹಲವು ಪ್ರದೇಶಗಳಲ್ಲಿ ಭದ್ರತಾ ವ್ಯವಸ್ಥೆಯನ್ನು ಬಿಗಿಗೊಳಿಸಲಾಗಿದೆ. ಪರಿಸ್ಥಿತಿ ಕುರಿತು ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.
0 Comments