ನವದೆಹಲಿ : ಪ್ರಸ್ತುತ ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನ ಪರಿಸ್ಥಿತಿ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ Air India ಮಧ್ಯಪ್ರಾಚ್ಯದ ಎಲ್ಲಾ ವಿಮಾನ ಸೇವೆಗಳನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಿದೆ.
ದುಬೈ, ದೋಹಾ, ಜೆಡ್ದಾ, ಅಬುಧಾಬಿ ಸೇರಿದಂತೆ ಹಲವು ನಗರಗಳಿಗೆ ಹೋಗುವ ಮತ್ತು ಬರುವ ವಿಮಾನಗಳನ್ನು ಮುಂದಿನ ಸೂಚನೆಗಳವರೆಗೆ ರದ್ದುಪಡಿಸಲಾಗಿದೆ. ಪ್ರಯಾಣಿಕರ ಮತ್ತು ಸಿಬ್ಬಂದಿಯ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಏರ್ ಇಂಡಿಯಾ ತಿಳಿಸಿದೆ.
ಪ್ರಯಾಣಿಕರು ತಮ್ಮ ವಿಮಾನಗಳ ಸ್ಥಿತಿಯನ್ನು ಪರಿಶೀಲಿಸಿ, ಹೆಚ್ಚಿನ ಮಾಹಿತಿಗಾಗಿ ಏರ್ ಇಂಡಿಯಾ ಅಧಿಕೃತ ವೆಬ್‌ಸೈಟ್ ಅಥವಾ ಸಹಾಯವಾಣಿ ಸಂಪರ್ಕಿಸಲು ಸೂಚಿಸಲಾಗಿದೆ.
0 Comments